,
Goodreads helps you follow your favorite authors. Be the first to learn about new releases!
Start by following Kuvempu.

Kuvempu Kuvempu > Quotes

 

 (?)
Quotes are added by the Goodreads community and are not verified by Goodreads. (Learn more)
Showing 1-14 of 14
“ಮುಚ್ಚು ಮರೆ ಇಲ್ಲದೆಯೇ ನಿನ್ನ ಮುಂದೆಲ್ಲವನು ಬಿಚ್ಚಿಡುವೇ ಓ ಗುರುವೇ ಅಂತರಾತ್ಮ”
Kuvempu
“ಕನ್ನಡ ಭಾಷೆ ಮಾತಡುವ ಜನರ ನಡುವೆಯೇ ಬಾಳಿ ಬದುಕಿ ಅನ್ನ ಸಂಪಾದಿನೆ ಮಾಡುತ್ತಾ ಜ್ಞಾನ, ಆಲೋಚನೆ, ವಿಚಾರಗಳನ್ನೆಲ್ಲಾ ಬೇರೊಂದು ಭಾಷೆಯಲ್ಲೇ ಇಡಲೆತ್ನಿಸುವವನು ನೀಗ್ರೋ ಗುಲಾಮರಿಂದ ದುಡಿಸಿಕೊಂಡು ದೊಡ್ಡವರಾದ ಅಮೆರಿಕನ್ ಶೋಷಕರಿಗಿಂತ ಕೆಟ್ಟ ಹಾಗೂ ಅತಿ ಸೂಕ್ಷ್ಮ ಶೋಷಕರು.
- ಅಣ್ಣನ ನೆನಪು, ಪುಟ ೧೩೦”
Kuvempu
“ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು”
Kuvempu
“ಅಲ್ಪ ನಾನು ಎಂದು ಕುಗ್ಗಿ ಮುದುಗ ಬೇಡವೋ:
ಓ ಅಲ್ಪವೆ, ಅನಂತದಿಂದ ಗುಣಿಸಿಕೊ;
ನೀನ್ ಅನಂತವಾಗವೆ!”
Kuvempu
“ಯಾವ ಕಾಲದ ಶಾಸ್ತ್ರವೇನು ಹೇಳಿದರೇನು? ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು?”
Kuvempu
“ಗುಡಿ ಚರ್ಚು ಮಸಜೀದಿಗಳ ಬಿಟ್ಟು ಹೊರಬನ್ನಿ
ಬಡತನವ ಬುಡಮುಟ್ಟ ಕೀಳ ಬನ್ನಿ”
Kuvempu
“ನೂರು ದೇವರನೆಲ್ಲ ನೂಕಾಚೆ ದೂರ
ಭಾರತಾಂಬೆಯೆ ದೇವಿ ನಮಗಿಂದು ಪೂಜಿಸುವ ಬಾರ!”
Kuvempu
“ಕನ್ನಡದ ವಿಷಯದಲ್ಲಿ ನಾನು ಟ್ಯಾಂಕರಿನಂತೆ ಮುನ್ನುಗ್ಗುತ್ತೇನೆ. ನೀವು ದಾರಿಬಿಟ್ಟುಕೊಟ್ಟಿರೋ ಸರಿ, ಇಲ್ಲವೋ ಅಪ್ಪಚ್ಚಿಯಾಗುತ್ತೀರಿ.”
Kuvempu
“ಇಲ್ಲಿ
ಯಾರೂ ಮುಖ್ಯರಲ್ಲ
ಯಾರೂ ಅಮುಖ್ಯರಲ್ಲ
ಯಾವುದೂ ಯ:ಕಶ್ಚಿತವಲ್ಲ!

ಇಲ್ಲಿ
ಯಾವುದಕ್ಕೂ ಮೊದಲಿಲ್ಲ
ಯಾವುದಕ್ಕೂ ತುದಿಯಿಲ್ಲ
ಯಾವುದೂ ಎಲ್ಲಿಯೂ ನಿಲ್ಲುವುದು ಇಲ್ಲ
ಕೊನೆ ಮುಟ್ಟುವುದು ಇಲ್ಲ

ಇಲ್ಲಿ
ಅವಸರವೂ ಸಾವಧಾನದ ಬೆನ್ನೇರಿದೆ!

ಇಲ್ಲಿ
ಎಲ್ಲಕ್ಕೂ ಇದೆ ಅರ್ಥ
ಯಾವುದೂ ಅಲ್ಲ ವ್ಯರ್ಥ
ನೀರೆಲ್ಲವೂ ತೀರ್ಥ!”
Kuvempu, ಮಲೆಗಳಲ್ಲಿ ಮದುಮಗಳು | Malegalali Madumagalu
“ಸರ್ವರಿಗೆ ಸಮಬಾಳು, ಸರ್ವರಿಗೆ ಸಮಪಾಲು”
Kuvempu
“ಸಾಯುತಿದೆ ನಿಮ್ಮನುಡಿ, ಓ ಕನ್ನಡದ ಕಂದರಿರ
ಹೊರನುಡಿಯ ಹೊರೆಯಿಂದ ಕುಸಿದು ಕುಗ್ಗಿ
ರಾಜನುಡಿಯೊಂದು, ರಾಷ್ಟ್ರನುಡಿಯೆಂದೊಂದು
ದೇವನುಡಿಯೆಂದೊಂದು ಹತ್ತಿ ಜಗ್ಗಿ,
ನಿರನಿಟಿಲು ನಿಟಿಲೆಂದು ಮುದಿಮೂಳೆ ಮುರಿಯುತಿದೆ
ಕನ್ನಡಮ್ಮನ ಬೆನ್ನು ಬಳುಕಿ ಬಗ್ಗಿ”
Kuvempu
“ಆ ಮತದ ಈ ಮತದ ಹಳೆಮತದ ಸಹವಾಸ ಸಾಕಿನ್ನು ಸೇರಿರೈ ಮನುಜಮತಕೆ ಓ, ಬನ್ನಿ, ಸೋದರರೆ, ವಿಶ್ವಪಥಕೆ!”
Kuvempu
“ಕನ್ನಡಕ್ಕಾಗಿ ಕೈಯೆತ್ತಿ, ನಿನ್ನ ಕೈ ಕಲ್ಪವೃಕ್ಷವಾಗುತ್ತದೆ.
ಕನ್ನಡಕ್ಕಾಗಿ ಕೊರಳೆತ್ತು, ಅಲ್ಲಿ ಪಂಚಜನ್ಯ ಮೂಡುತ್ತದೆ.
ಕನ್ನಡಕ್ಕಾಗಿ ಕಿರುಬೆರಳಿತ್ತಿದರೂ ಸಾಕು ಇಂದು ಅದೆ ಗೋವರ್ಧನಗಿರಿಧಾರಿಯಾಗುತ್ತದೆ”
Kuvempu
“ಕೋಟಿ ಧನವಿದ್ದರೂ ಪಟ್ಟಣವು ಗೋಳು,
ಕಾಸಿಲ್ಲದಿದ್ದರೂ ಸುಖ ಹಳ್ಳಿ ಬಾಳು”
Kuvempu

All Quotes | Add A Quote