Jogi Girish Rao Hatwar ಹುಟ್ಟೂರು ಮಂಗಳೂರಿನ ಸುರತ್ಕಲ್ ಸಮೀಪದಲ್ಲಿರುವ ಹೊಸಬೆಟ್ಟು. ಹತ್ವಾರ್ ಮನೆತನಕ್ಕೆ ಸೇರಿದ ಜೋಗಿ ಓದಿದ್ದು ಗುರುವಾಯನಕೆರೆ ಮತ್ತು ಉಪ್ಪಿನಂಗಡಿಗಳಲ್ಲಿ. ತಂದೆ ಶ್ರೀಧರರಾವ್ ಕೃಷಿಕರು. ತಾಯಿ ಶಾರದೆ. ಹಿರಿಯ ಸೋದರ ಹತ್ವಾರ ನಾರಾಯಣ ರಾವ್ ಯಕ್ಷಗಾನ ಪ್ರಸಂಗಗಳನ್ನು ಬರೆದು, ತಾಳಮದ್ದಲೆ ಅರ್ಥಧಾರಿಯಾಗಿ, ಲೇಖಕರಾಗಿ ಪ್ರಸಿದ್ಧರು. ೧೮ನೇ ವಯಸ್ಸಿಗೆ ಬರಹ ಆರಂಭಿಸಿದ ಜೋಗಿ ಓದಿದ್ದು ಬಿ.ಕಾಂ. ಕಾಲೇಜು ದಿನಗಳಲ್ಲಿ ಅವರ ಸಾಹಿತ್ಯ ಆಸಕ್ತಿಯನ್ನು ರೂಪಿಸಿದವರು ಬಳ್ಳ ವೆಂಕಟರಮಣ. ಬೆಂಗಳೂರಿಗೆ ೧೯೮೯ರಲ್ಲಿ ಕಾಲಿಟ್ಟ ಗಿರೀಶ ರಾವ್ ಹತ್ವಾರ್ ಅವರನ್ನು ಜೋಗಿಯಾಗಿ ರೂಪಿಸಿದವರು ವೈಎನ್ ಕೆ. ಸದ್ಯ ಬೆಂಗಳೂರಲ್ಲಿ ನೆಲೆನಿಂತಿರುವ ಜೋಗಿ ಪತ್ನಿ ಜ್ಯೋತಿ, ಮಗಳು ಖುಷಿಯೊಂದಿಗೆ ಜೀವಿಸುತ್ತಿದ್ದಾರೆ.
ಎಲ್ಲಿಂದಲೋ ಬಂದು ಊರಲ್ಲಿ ಹೋಟೇಲ್ ಶುರುಮಾಡಿ ಕ್ರಮೇಣ ಅಲ್ಲಿನ ಸರ್ವಾಧಿಕಾರಿ ಅಗುವ ಚಿಕ್ಕಪ್ಪ. ಹಿಂದುತ್ವದ ಪ್ರಯೋಗಶಾಲೆ ಮಾಡಿ,ಊರ ಕಪಿಮುಷ್ಟಿಯಲ್ಲಿಟ್ಟುಕೊಂಡ ಚಿಕ್ಕಪ್ಪ , ಒಂದು ಘಟನೆ ಆತನ ಅಸಹಾಯಕನನ್ನಾಗಿ ಮಾಡ್ತದೆ.
‘Chikkappa’ is a nice tale, which you’ll probably believe that happened in Dakshin Kannada! Vikram Hatwar's style makes it to read it in a flow, I read this in a single sitting.