Jump to ratings and reviews
Rate this book

ವಿಶಿಷ್ಟ : ಶ್ರೀ ರಾಮಾನುಜಾಚಾರ್ಯರ ಜೀವನಾಧಾರಿತ ಕಾದಂಬರಿ

Rate this book
ಖ್ಯಾತ ಲೇಖಕ ಡಾ. ಬಾಬು ಕೃಷ್ಣಮೂರ್ತಿ ಅವರ ಕೃತಿ-ವಿಶಿಷ್ಟ. ವಿಶಿಷ್ಠಾದ್ವೈತ ಸಿದ್ಧಾಂತದ ಪ್ರತಿಪಾದಕ ಶ್ರೀ ರಾಮಾನುಜಾಚಾರ್ಯರ ಜೀವನ ಆಧರಿತ ಕಾದಂಬರಿ. ಶಂಕರಾಚಾರ್ಯರು ಅದ್ವೈತ, ಮಧ್ವಾಚಾರ್ಯರು ದ್ವೈತ ಹಾಗೂ ಶ್ರೀರಾಮಾನುಜಾಚಾರ್ಯರು ವಿಶಿಷ್ಟಾದ್ವೈತ ಸಿದ್ಧಾಂತದ ಪ್ರತಿಪಾದಕರು. ದ್ವೈತ-ಅದ್ವೈತ ಮಧ್ಯೆ ಸಮಾನ ಆಂತರ ಕಾಯ್ದುಕೊಂಡು ವಿಶಿಷ್ಟಾದ್ವೈತ ಸಿದ್ಧಾಂತವನ್ನು ಒಪ್ಪಿದ ಅನುಯಾಯಿಗಳೇ ಹೆಚ್ಚು. ಹೀಗಾಗಿ, ಶ್ರೀರಾಮಾನುಜಾಚಾರ್ಯರ ವಿಶಿಷ್ಟಾದ್ವೈತ ಸಿದ್ಧಾಂತವು ಪ್ರಾಮುಖ್ಯತೆ ಪಡೆದಿದೆ. ಶ್ರೀ ರಾಮಾನುಜಾಚಾರ್ಯರ ಬದುಕು- ಚಿಂತನೆ, ಪ್ರತಿಪಾದನಾ ರೀತಿ ಎಲ್ಲವನ್ನೂ ಲೇಖಕರು ಸವಿವರವಾಗಿ ಕಾದಂಬರಿ ರೂಪದಲ್ಲಿ ದಾಖಲಿಸಿದ್ದೇ ಈ ಕೃತಿ.

552 pages, Hardcover

Published January 1, 2020

6 people want to read

About the author

ಸಾಹಿತ್ಯ, ಪತ್ರಿಕೋದ್ಯಮ ಎರಡು ಕ್ಷೇತ್ರಗಳಲ್ಲೂ ಚಿರಪರಿಚಿತರಾದ ಬಾಬು ಕೃಷ್ಣಮೂರ್ತಿ ಹುಟ್ಟಿದ್ದು ಬೆಂಗಳೂರು. ಸಾಹಿತ್ಯ ಹಾಗೂ ಪತ್ರಿಕೋದ್ಯಮದಲ್ಲಿ ಅತೀವ ಆಸಕ್ತಿ. ಅವರ ಸಂಪಾದಕತ್ವದಲ್ಲಿ ಬಾಲಮಂಗಳ (ಪಾಕ್ಷಿಕ), ಬಾಲಮಂಗಳ ಚಿತ್ರಕಥಾ (ಮಕ್ಕಳ ವ್ಯಂಗ್ಯ ಚಿತ್ರ ಪಾಕ್ಷಿಕ), ಗಿಳಿವಿಂಡು (ಶಿಶು ಪಾಕ್ಷಿಕ ಪತ್ರಿಕೆ) ಪ್ರಕಟವಾಗಿವೆ. ಇವರು ರಚಿಸಿದ ಸ್ವಾತಂತ್ರ್ಯವೀರ ಚಂದ್ರಶೇಖರ ಆಜಾದ್ ಕುರಿತು ಆರು ವರ್ಷ ಕಾಲ ಸಂಶೋಧನೆ, ಸ್ಥಳವೀಕ್ಷಣೆ ನಡೆಸಿ ರಚಿಸಿದ ಕೃತಿ ‘ಅಜೇಯ’. ಅವರ ಪ್ರಮುಖ ಕೃತಿಗಳು - ಅಜೇಯ (1974), ಸಿಡಿಮದ್ದು ನೆತ್ತರು ನೇಣುಗಂಬ (1984), ಅದಮ್ಯ (1984), ರುಧಿರಾಭಿಷೇಕ (2005), ಡಾ. ಸಿ.ಜಿ. ಶಾಸ್ತಿಒಂದು ಯಶೋಗಾಥೆ (2007), 1857-ಭಾರತದ ಸ್ವಾತಂತ್ರ್ಯ ಸಂಗ್ರಾಮ (2007), ಕ್ರೈಮ್ ಫೈಲ್ (2007), ಯಾವುದು ಚರಿತ್ರೆ? (2008), ಯುಗದೃಷ್ಟ ಭಗತ್‌ಸಿಂಗ್ (2012), ಕ್ರಾಂತಿಪರ್ವ (2015), ಮಹಾಸಾಧಕ (2016), ಸ್ವಾತಂತ್ರ್ಯ ಹೋರಾಟದ ಹೀರೋಗಳು (2016), ಭಾಗ-2 (2017).

‘ಮಿಲ್ಟ್ರಿ ತಾತ ಕಥೆ ಹೇಳ್ತಾರೆ’ ಕೃತಿಗೆ ರಾಜ್ಯ ಸರಕಾರದ ಪ್ರಶಸ್ತಿ, ‘ಅಜೇಯ’ ಮತ್ತು ‘ಅದಮ್ಯ’ ಕೃತಿಗಳಿಗೆ ರಾಜ್ಯ ಸಾಹಿತ್ಯ ಅಕಾಡಮಿ ಪ್ರಶಸ್ತಿ, ವಿಶ್ವೇಶ್ವರಯ್ಯ ಎಂಜನಿಯರಿಂಗ್ ಪ್ರತಿಷ್ಠಾನ ಪ್ರಶಸ್ತಿ, ಪತ್ರಿಕೋದ್ಯಮದ ಸೇವೆಗಾಗಿ ಕರ್ನಾಟಕ ಜ್ಯೋತಿ ಪ್ರಶಸ್ತಿ, ಶಿವಮೊಗ್ಗದ ‘ನಾವಿಕ’ ದಿನಪತ್ರಿಕೆಯ ರಜತ ಮಹೋತ್ಸವ ಪ್ರಶಸ್ತಿ, ರಂಗಭೂಮಿ ಕೊಡುಗೆಗಾಗಿ ಉದಯ ಕಲಾನಿಕೇತನದಿಂದ ಸನ್ಮಾನ ದೊರೆತಿದೆ.

Ratings & Reviews

What do you think?
Rate this book

Friends & Following

Create a free account to discover what your friends think of this book!

Community Reviews

5 stars
2 (100%)
4 stars
0 (0%)
3 stars
0 (0%)
2 stars
0 (0%)
1 star
0 (0%)
No one has reviewed this book yet.

Can't find what you're looking for?

Get help and learn more about the design.